ಮಂಗಳೂರು, ವಿಟ್ಲ,ಮೇ 05 (DaijiworldNews/SM): ಕರಾವಳಿ ಜಿಲ್ಲೆಗಳಲ್ಲಿ ಮಹಿಳೆಯರು, ಮಕ್ಕಳ ನಾಪತ್ತೆ ಪ್ರಕರಣ ಹೆಚ್ಚಳವಾಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಡಿಸಿಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಈ ವಿಚಾರವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಮಂಗಳೂರಿನಲ್ಲಿ ನಾಪತ್ತೆಯಾಗಿರುವವರ ಪತ್ತೆ ಹಚ್ಚುವ ಕಾರ್ಯ ತೀವ್ರ ಗತಿಯಲ್ಲಿ ನಡೆಯುತ್ತಿದೆ. ಕೆಲವು ಪ್ರಕರಣಗಳನ್ನು ಪತ್ತೆ ಹಚ್ಚುವುದು ಸವಾಲಾಗಿದೆ. ಬಹುತೇಕ ಎಲ್ಲಾ ಪ್ರಕರಣಗಳನ್ನು ಪತ್ತೆ ಮಾಡಲಾಗಿದೆ ಎಂದು ಡಿಸಿಪಿ ಸ್ಪಷ್ಟಪಡಿಸಿದ್ದಾರೆ.