ಮಂಗಳೂರು, ಮೇ 06 (DaijiworldNews/MS): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 43,69,981 ಲಕ್ಷ ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಜಾಲನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಗುರುವಾರ ದುಬೈನಿಂದ ಬಂದಿಳಿದ ಪ್ರಯಾಣಿಕನನ್ನುತಪಾಸಣೆಗೊಳಪಡಿಸಿದಾಗಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸುವಾಗ ಸಿಕ್ಕಿಬಿದ್ದಿದ್ದಾನೆ. ಈತನಿಂದ 732 ಗ್ರಾಂ ತೂಕದ 37,69,800 ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಚಿನ್ನವನ್ನು ಮೂರು ಮಾತ್ರೆಗಳ ಮಾದರಿಯಲ್ಲಿ ಪೇಸ್ಟ್ ರೂಪದಲ್ಲಿ ತನ್ನ ಗುದನಾಳದಲ್ಲಿ ಬಚ್ಚಿಟ್ಟುಕೊಂಡಿರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಇನ್ನೊಂದು ಪ್ರಕರಣದಲ್ಲಿ ದುಬೈನಿಂದ ಆಗಮಿಸಿದ ಪ್ರಯಾಣಿಕನೊಬ್ಬ ನೆಸ್ಲೆ ಬ್ರಾಂಡ್ನ ಡೈರಿ ಕ್ರೀಂ ಟನ್ ತಳಭಾಗದಲ್ಲಿ ಸಣ್ಣ ತುಂಡುಗಳಲ್ಲಿ ಚಿನ್ನವನ್ನು ಬಚ್ಚಿಟ್ಟು ತಂದಿರುವುದನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆತನ ಬಳಿ 6,00,181 ರೂ. ಮೌಲ್ಯದ ಚಿನ್ನ ಪತ್ತೆಯಾಗಿತ್ತು ಎಂದು ತಿಳಿದು ಬಂದಿದೆ.