ಉಡುಪಿ, ಮೇ 09 (DaijiworldNews/MS): ಉಡುಪಿಯ ಆತ್ರಾಡಿ ಮದಗದ ಬಳಿ ಇರುವ ಮನೆಯೊಂದರಲ್ಲಿ ತಾಯಿ ಮಗಳ ಶವ ಪತ್ತೆಯಾಗಿದ್ದು , ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಮೃತರನ್ನು ತಾಯಿ ಚೆಲುವಿ(30) ಮಗಳು ಪ್ರಿಯಾ (10) ಎಂದು ಗುರುತಿಸಲಾಗಿದೆ.
ಮನೆಯ ಕೋಣೆಯಲ್ಲಿ ತಾಯಿ - ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು , ಮೃತದೇಹಗಳ ಬಾಯಿಯಲ್ಲಿ ರಕ್ತದ ಕಲೆ ಕಂಡುಬಂದಿರುವುದು ಸಂಶಯಕ್ಕೆ ಎಡೆಮಾಡಿದೆ.
ಮಣಿಪಾಲ ಖಾಸಗಿ ಸಂಸ್ಥೆಯಲ್ಲಿ ಹೌಸ್ಕೀಪಿಂಗ್ ಕೆಲಸ ಮಾಡುತ್ತಿದ್ದ ಮಹಿಳೆ , ಮಗಳೊಂದಿಗೆ ವಾಸವಾಗಿದ್ದರು. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಮತ್ತುಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸ್ಥಳಕ್ಕೆ ಭೇಟಿ ನೀಡಿರುವ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ ಭೇಟಿ ನೀಡಿದ್ದಾರೆ.