ಬಂಟ್ವಾಳ, ಮೇ 09 (DaijiworldNews/SM): ಕನ್ಯಾನದಲ್ಲಿ ನಡೆದ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಮಾತನಾಡಿ ಕುಟುಂಬದ ಬಡತನವನ್ನು ಬಳಸಿಕೊಂಡು ದುರುಪಯೋಪಡಿಸಲಾಗಿದೆ ಎಂದರು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಧರ್ಮ ಸಂರಕ್ಷಣೆಯ ವಿಚಾರದಲ್ಲಿ ಪ್ರತಿಯೊಬ್ಬರು ಜಾಗೃತರಾಗಬೇಕು. ಸನಾತನ ಹಿಂದೂ ಧರ್ಮದ ಪುನರುತ್ಥಾನ ಮಾಡುವ ಕಾರ್ಯಕ್ಕೆ ಕೈಜೋಡಿಸಬೇಕಾಗಿದೆ. ವಾಮ ಮಾರ್ಗಗಳ ವಿರುದ್ಧ ಪ್ರತಿಭಟನೆ ಆರಂಭವಾಗಿದ್ದು, ನ್ಯಾಯ ಸಿಗದೇ ಹೋದರೆ ತೀವ್ರವಾದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಹೇಳಿದರು.