ಕಾಸರಗೋಡು,ಜ 04(MSP): ಜಿಲ್ಲೆ ಸಹಜ ಸ್ಥಿತಿಗೆ ಬರುತ್ತಿದ್ದಂತೆ ತಲಪಾಡಿಯಲ್ಲಿ ಮತ್ತೆ ಬಸ್ಸಿಗೆ ಕಲ್ಲೆಸೆದ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ತಂಡವು ಕೆಎಸ್ ಆರ್ ಟಿ ಸಿ ಬಸ್ಸಿಗೆ ಕಲ್ಲೆಸೆದು ಪರಾರಿಯಾಗಿದ್ದು , ಬಸ್ಸಿನ ಗಾಜು ಹುಡಿಯಾಗಿದೆ . ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಮಂಜೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಕಳೆದ ಎರಡು ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು ಎಂಟು ಕೆ ಎಸ್ ಆರ್ ಟಿ ಸಿ ಬಸ್ಸುಗಳಿಗೆ ಕಲ್ಲೆಸೆಯಲಾಗಿದೆ