ಮಂಗಳೂರು, ಮೇ 13 (DaijiworldNews/SM): ನಗರ ವ್ಯಾಪ್ತಿಯ ಮೂಡಬಿದ್ರಿ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವ ಅಮಿಷವೊಡ್ಡಿ ಅತ್ಯಾಚಾರ ನಡೆಸಿ ಆಕೆಯಿಂದ ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಲಾಗಿದೆ. ತೊಕ್ಕೊಟ್ಟು ನಿವಾಸಿ ಶಾನ್ ನವಾಸ್(36) ಬಂಧಿತ ಆರೋಪಿ.
ಮೂಡಬಿದ್ರಿ ನಿವಾಸಿ ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ಹಣವನ್ನು ಸುಲಿಗೆ ಮಾಡಿದ್ದು, ಅಲ್ಲದೇ ಆಕೆಗೆ ಮಾದಕ ವಸ್ತುಗಳನ್ನು ಬಲವಂತವಾಗಿ ಸೇವನೆ ಮಾಡಿಸಿ ಆಕೆಯ ನಗ್ನ ಚಿತ್ರಗಳನ್ನು ಮೊಬೈಲ್ ನಲ್ಲಿ ಚಿತ್ರಿಕರಣ ಮಾಡಿ ನಂತರ ಹಣವನ್ನು ನೀಡಬೇಕೆಂದು ಬೆದರಿಕೆ ಹಾಕಿ ರೂ.1,50,000/- ಸುಲಿಗೆ ಮಾಡಿದ್ದನು. ವಿವಿಧ ಕಡೆಗಳಲ್ಲಿನ ಲಾಡ್ಜ್ ಗಳಿಗೆ ಕರೆದುಕೊಂಡು ಹೋಗಿ ಬಲತ್ಕಾರವಾಗಿ ಅತ್ಯಾಚಾರ ನಡೆಸಿದ್ದನು ಈ ಬಗ್ಗೆ ನೊಂದ ಯುವತಿಯು ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ಮುಂದಿನ ತನಿಖೆಯನ್ನು ಕೈಗೊಳ್ಳುವಂತೆ ಕಡತವನ್ನು ಮಂಗಳೂರು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ವರ್ಗಾಯಿಸಲಾಗಿತ್ತು.