ಬೈಂದೂರು, ಮೇ 14 (DaijiworldNews/HR): ಕರಾವಳಿ ಜಿಲ್ಲೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿದ್ದು, ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಕ್ಷೇತ್ರದ ಆಡಳಿತ ಮಂಡಳಿ ಪೂರ್ಣ ಕುಂಭ ಸ್ವಾಗತದೊಂದಿಗೆ ಸಚಿವರನ್ನು ಬರಮಾಡಿಕೊಂಡಿದ್ದಾರೆ.
ಇಂದು ಬೆಳಗ್ಗೆ ದೇವಳದಲ್ಲಿ ವಿಶೇಷ ಪೂಜೆಯಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ದೇವಳದ ಪ್ರಧಾನ ಅರ್ಚಕರಾದ ಗೋವಿಂದ ಅಡಿಗ ಮತ್ತು ನರಸಿಂಹ ಅಡಿಗ ನೇತ್ರತ್ವದಲ್ಲಿ ವಿಶೇಷ ಪೂಜೆ ನಡೆದಿದೆ. ಇನ್ನು ಇದೇ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಚಿವೆ ಶೋಭಾ ಕರಂದ್ಲಾಜೆಯವರು ಕೂಡ ಹಿರಿಯ ಸಚಿವೆಯ ಜೊತೆಗೆ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ.
ಇನ್ನು ಇದೇ ಸಂದರ್ಭ ಸಿಂಗಾಪುರದ ಗ್ರಹ ಸಚಿವ ಕಾಶಿ ವಿಶ್ವನಾಥನ್ ಮುರುಗನ್ ಅವರು ಕೂಡ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.