ಮಂಗಳೂರು,ಅ 23: ಕರ್ನಾಟಕದ ಕಾಂಗ್ರೇಸ್ ನೇತೃತ್ವದ ಸರಕಾರವೂ ಹಲವು ಇತಿಹಾಸದ ಮಹನೀಯರ ಜಯಂತಿ ಆಚರಿಸುವ ಯೋಜನೆಯನ್ನು ಹಾಕಿಕೊಂಡಿದ್ದು, ಇದು ಶೀಘ್ರದಲ್ಲಿ ಜಾರಿಗೆ ಬರಲಿದೆ ಎಂದು ವಿಧಾನ ಪರಿಷತ್ ನ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದರು.
ನಗರದ ಬಂಟ್ಸ್ ಹಾಸ್ಟೆಲ್ ನ ರಾಮಕೃಷ್ಣ ವಿದ್ಯಾಸಂಸ್ಥೆ ಯಲ್ಲಿ ನಡೆದ , ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದ.ಕ ಜಿಲ್ಲೆ ವತಿಯಿಂದ "ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ" ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿಸಿದ ಅವರು ಕಿತ್ತೂರು ರಾಣಿ ಚೆನ್ನಮ್ಮ ಒಬ್ಬ ವೀರ ವನಿತೆ. ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಇಂದು ಚರಿತ್ರೆಯ ಪುಟಗಳಲ್ಲಿ ಅಜಾರಾಮರವಾಗಿದ್ದಾರೆ. ಇವರ ಸಾಧನೆ ಸ್ಮರಣೀಯ ಎಂದರು.
ಕಾರ್ಯಕ್ರಮದಲ್ಲಿ ಮೇಯರ್ ಕವಿತಾ ಸನಿಲ್, ಪ್ರದೀಪ್ ಕಲ್ಕೂರ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್ ಖಾದರ್, ಮಹಮ್ಮದ್ ಮೋನು, ವಸಂತ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.