ಸುಳ್ಯ, ಮೇ 16 (DaijiworldNews/DB): ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸುಳ್ಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಬೆಳ್ಳಾರೆಯಲ್ಲಿ ಶನಿವಾರ ರಾತ್ರಿ ವೇಳೆಗೆ ಈತ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ. ಮಾರುತಿ 800 ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಕೊಂಡೊಯ್ಯುತ್ತಿರುವ ಖಚಿತ ಮಾಹಿತಿ ಮೇರೆಗೆ ಬೆಳ್ಳಾರೆಯ ಬೂಡು ಸೇತುವೆ ಬಳಿ ಕಾರನ್ನು ಪೊಲೀಸರು ಅಡ್ಡಗಟ್ಟಿದ್ದಾರೆ. ಕಾರು ಮತ್ತು ಜಾನುವಾರನ್ನು ಕೂಡಾ ವಶಪಡಿಸಿಕೊಳ್ಳಲಾಗಿದೆ.
ಅಲಂಗಾರಿನಿಂದ ಬೆಳ್ಳಾರೆ ಮಾರ್ಗವಾಗಿ ಮರ್ಕಂಜಕ್ಕೆ ಜಾನುವಾರನ್ನು ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.