ಸುಳ್ಯ, ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಡೆಕೋಲಿನ ಅಂಬ್ರೋಟಿ ಕಕ್ಕಾಜೆ ನಿವಾಸಿ ಅಶ್ವಿನ್ ಬಂಧಿತ ಆರೋಪಿಯಾಗಿದ್ದಾನೆ.
ಅಶ್ವಿನ್ ಪಿಯುಸಿ.ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು ಆಕೆಗೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಆರೋಪಿಸಲಾಗಿತ್ತು. ಅದಂರಂತೆ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.