ಬಂಟ್ವಾಳ, ಮೇ 17 (DaijiworldNews/HR): ಬಂಟ್ವಾಳ ತಾಲೂಕು ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಅಡ್ಯನಡ್ಕ ನಿವಾಸಿ ಗಿರೀಶ್ ಮತ್ತು ಮೈರ ನಿವಾಸಿ ರಕ್ಷಿತ್ ಕುಮಾರ್ ಎಂಬವರಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೆ. ಮಹಮ್ಮದ್ ಶರೀಫ್ (33), ಸಾದಿಕ್ (20) ಎಂದು ಗುರುತಿಸಲಾಗಿದೆ.
ಮೇ 14ರಂದು ಬಂಟ್ವಾಳ ತಾಲೂಕು ಕೇಪು ಗ್ರಾಮದ ಕರವೀರ ಬಸ್ ನಿಲ್ದಾಣದ ಬಳಿ ಅಡ್ಯನಡ್ಕ ನಿವಾಸಿ ಗಿರೀಶ್ ಮತ್ತು ಮೈರ ನಿವಾಸಿ ರಕ್ಷಿತ್ ಕುಮಾರ್ ಎಂಬವರಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣವು ವಿಟ್ಲ ಠಾಣೆಯಲ್ಲಿ ದಾಖಲಾಗಿದ್ದು, ಪೊಳಿಸರು ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಇನ್ನು ಪೊಲೀಸರು ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.