ಮಂಗಳೂರು: ಮೇ 19 (DaijiworldNews/MS): ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಇದೇ ಮೇ.27ರ ಶುಕ್ರವಾರ ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಗಳು ಪ್ರತಿ ಮನೆಯ ಸರ್ವೇ ಮಾಡಿಸಿ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಜಿಗಳನ್ನು ಸ್ವೀಕರಿಸುವಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ.
ಆದಾಗ್ಯೂ ಸಾರ್ವಜನಿಕರು ನೇರವಾಗಿ ತಮ್ಮ ಅಹವಾಲುಗಳನ್ನು ನೀಡಲು ಬಯಸಿದ್ದದಲ್ಲೀ, ಗಂಜಿಮಠ ಗ್ರಾಮ ಪಂಚಾಯತ್ ಹಾಜರಾಗಿ ನೀಡಬಹುದಾಗಿದೆ.
ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಜೊತೆಗಿರಲಿದ್ದು, ಸಮಸ್ಯೆಗಳನ್ನು ಅದಷ್ಟು ಸ್ಥಳದಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಯಾವುದೇ ಸಮಸ್ಯೆ ಸ್ಥಳದಲ್ಲಿ ಬಗೆಹರೆಯದಲ್ಲಿ ಮುಂದಿನ ಸೂಕ್ತವಾದ ದಿನವನ್ನು ನಿರ್ಧರಿಸಿ ಸದ್ರಿ ಗ್ರಾಮದಲ್ಲಿಯೇ ಮತ್ತೊಮ್ಮೆ ಗ್ರಾಮ ವಾಸ್ತವ್ಯ ನಡೆಸಲು ನಿರ್ಧರಿಸಲಾಗುವುದು. ಈ ಸಮಯದಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲನೆ ಮಾಡುವಂತೆ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.