ಉಡುಪಿ, ಮೇ 19 (DaijiworldNews/HR): 136 ಡೆಂಘೆ ಪ್ರಕರಣ ಜಿಲ್ಲೆಯಲ್ಲಿ ದಾಖಲಾಗಿದ್ದು, ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಮುದೂರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ 10 ದಿನ ರಜೆ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.
ಜಡ್ಕಲ್ ಮುದೂರು ಭಾಗದಲ್ಲಿ ನಿರಂತರವಾಗಿ ಡೆಂಘೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸ್ಥಳೀಯ ಶಾಸಕ ಸುಕುಮಾರ್ ಶೆಟ್ಟಿ ಮತ್ತು ಜಿಲ್ಲಾಧಿಕಾರಿ ಕೂರ್ಮರಾಮ್ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಿದ ಬಳಿಕ ಮೇ 19ರಿಂದ 28ರವರೆಗೆ ರಜೆ ಘೋಷಿಸಲಾಗಿದೆ.
ಇನ್ನು ಈ ಪ್ರದೇಶದಲ್ಲಿರುವ ಪ್ರತಿ ಮನೆಗೂ ಆರೋಗ್ಯ ಸಿಬ್ಬಂದಿ ಭೇಟಿ ನೀಡುತ್ತಿದ್ದು, ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಅರಿವು ಮೂಡಿಸುತ್ತಿದ್ದಾರೆ.