ಮಂಗಳೂರು, ಮೇ 20 (DaijiworldNews/HR): ಟೆಂಪೋ ಟ್ರಾವೆಲರ್(ಟಿಟಿ) ಮತ್ತು ಕಾರು ನಡುವೆ ಅಪಘಾತ ನಡೆದಿರುವ ಘಟನೆ ಬಿಕರ್ನಕಟ್ಟೆಯಲ್ಲಿ ನಡೆದಿದ್ದು, ಸರಕಾರಿ ಶಾಲೆಯ ಕಾಂಪೌಂಡ್ ಗೋಡೆಗೆ ಹಾನಿಯಾಗಿದೆ.
ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿಗೆ ಇಂದು ಮುಂಜಾನೆ ನಗರದ ಕಡೆಗೆ ಹೋಗುತ್ತಿದ್ದ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದ್ದು, ಬಿಕರ್ನಕಟ್ಟೆ ಸರಕಾರಿ ಶಾಲೆಯ ಕಾಂಪೌಂಡ್ ಗೋಡೆಗೆ ಹಾನಿಯಾಗಿದೆ. ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಈ ಬಗ್ಗೆ ಕಂಕನಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.