ಬೈಂದೂರು, ಮೇ 20 (DaijiworldNews/MS): ತಾಲೂಕಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ರಾಜಗೋಪುರ ಸಮರ್ಪಣೆಯ ಅಂಗವಾಗಿ ಹಮ್ಮಿಕೊಳ್ಳಲಾದ ಶತಚಂಡಿಕಾ ಯಾಗದ ಪೂರ್ಣಾಹುತಿ ಶುಕ್ರವಾರ ದೇವಳದ ಆವರಣದಲ್ಲಿ ಜರುಗಿತು.
ಪೂರ್ಣಾಹುತಿಯ ಅಂಗವಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಕೋರಿದರು.
ಕಾರ್ಯಕ್ರಮಕ್ಕೆ ಆಗಮಿಸಿದ ಡಿ.ಕೆ ಶಿವಕುಮಾರ್ ಅವರನ್ನು ಯು.ಬಿ. ಶೆಟ್ಟಿ ದಂಪತಿಗಳು ಹಾಗೂ ದೇವಳದ ಅರ್ಚಕರು ಸನ್ಮಾನಿಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮಾಜಿ ಶಾಸಕ ಯು.ಆರ್. ಸಭಾಪತಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನ್ ಕುಮಾರ್ ಉಪ್ಪುಂದ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಕೆಪಿಸಿಸಿ ಸದಸ್ಯ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉದ್ಯಮಿ ಸುರೇಂದ್ರ ಶೆಟ್ಟಿ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.
ಶತಚಂಡಿಕಾ ಯಾಗದ ಪೂರ್ಣಾಹುತಿ, ಶ್ರೀದೇವಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭ ಯು.ಬಿ.ಎಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಯು.ಬಿ. ಶೆಟ್ಟಿ, ರಂಜನಾ ಯು.ಬಿ. ಶೆಟ್ಟಿ, ಸಹೋದರಿಯರಾದ ಶುಭಶ್ರೀ ಶೆಟ್ಟಿ ಯಶಶ್ರೀ ಬಿ. ಶೆಟ್ಟಿ ದೇವಳದ ಅರ್ಚಕರು,ಆಡಳಿತಾಧಿಕಾರಿಗಳು ಉಪಸ್ಥಿತರಿದ್ದರು.