ಕರಾವಳಿ, ಜ 07(SM): ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾರ್ಮಿಕ ಸಂಘಟನೆಗಳು ಜ. 8 ಮತ್ತು 9ರಂದು ಭಾರತ ಬಂದ್ಗೆ ಕರೆ ನೀಡಲಾಗಿದ್ದು, ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಮಾಹಿತಿ ನೀಡಿದ್ದಾರೆ. ಒಂದೊಮ್ಮೆ ಬಂದ್ ಆದಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳ ಮಕ್ಕಳಿಗೆ ತೊಂದರೆಯಾಗಬಹುದೆನ್ನುವ ನಿಟ್ಟಿನಲ್ಲಿ ರಜೆ ಘೋಷಿಸಲಾಗಿದೆ.
ಇನ್ನು ಉಡುಪಿ ಜಿಲ್ಲೆಯಲ್ಲೂ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶಿಸಿದ್ದಾರೆ.