ಬಂಟ್ವಾಳ, ಮೇ 21 (DaijiworldNews/MS): ಅಂತರಾಷ್ಟ್ರೀಯ ಮಟ್ಟದ ಕಬ್ಬಡ್ಡಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ, ಬ್ಯಾಂಕ್ ಉದ್ಯೋಗಿಯಾಗಿದ್ದ ಉದಯ ಚೌಟ ಮೇ.21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ಅವರು ವಾಸವಿದ್ದರು. ಪ್ರಸ್ತುತ ಬ್ಯಾಂಕ್ ಆಫ್ ಬರೋಡಾದ ಸುರತ್ಕಲ್ ಶಾಖೆಯಲ್ಲಿ ಉಪ ಪ್ರಬಂಧಕರಾಗಿದ್ದರು. ಅಲ್ಲದೆ ದ.ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷರೂ ಆಗಿದ್ದರು
ಮೃತರು ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಚಿನ್ನದ ಪದಕವನ್ನು ಪಡೆದಿದ್ದರು. 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು.ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.