ಕಾಸರಗೋಡು, ಜ 07(SM): ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ಈ ವರೆಗೆ 184.29 ಕೋಟಿ ರೂ.ವೆಚ್ಚ ಮಾಡಿರುವುದಾಗಿ ಕೇರಳ ಕಂದಾಯ ಸಚಿವ ಇ.ಚಂದ್ರಶೇಖರನ್ ತಿಳಿಸಿದರು.
ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ ವಸತಿ ಘಟಕದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 6,211 ಸಂತ್ರಸ್ತರಿಗೆ ಅನೇಕ ಸಹಾಯಗಳು ಲಭಿಸಿವೆ. ಸಂತ್ರಸ್ತರ ಪಟ್ಟಿಯಲ್ಲಿ ಸೇರದೇ ಇರುವ ಮಾರಕ ರೋಗಗಳಿಂದ ಬಳಲುತ್ತಿರುವ 505 ಮಂದಿಗೆ ಚಿಕಿತ್ಸಾ ಸೌಲಭ್ಯ ಮಂಜೂರು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಸಭೆಯಲ್ಲಿ ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು, ಶಾಸಕ ಎನ್.ಎ.ನೆಲ್ಲಿಕುನ್ನು ಮತ್ತಿತರರು ಉಪಸ್ಥಿತರಿದ್ದರು.