ವಿಟ್ಲ, ಮೇ 22 (DaijiworldNews/SM): ಆಟೋ ರಿಕ್ಷಾ ಹಾಗೂ ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕನ್ಯಾನದಲ್ಲಿ ನಡೆದಿದೆ. ಘಟನೆಯಲ್ಲಿ ಆಟೋ ಚಾಲಕ ಗಂಭೀರ ಗಾಯಗೊಂಡಿದ್ದಾನೆ.
ಆಟೋ ರಿಕ್ಷಾ ಮತ್ತು ಪಿಕಪ್ ನಡುವೆ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಸ್ಥಳೀಯರ ಸಹಕಾರದೊಂದಿಗೆ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.