ಕಾಸರಗೋಡು, ಮೇ 25 (DaijiworldNews/MS): ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನಿರಿಸಲಾಗಿದ್ದ ಸುಮಾರು ಒಂದು ಕ್ವಿಂಟಾಲ್ ನಷ್ಟು ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಿದ್ಯಾನಗರ ಠಾಣಾ ಪೊಲೀಸರು ವಶಪಡಿಸಿ ಕೊಂಡಿದ್ದಾರೆ.
ಕಲ್ಲಕಟ್ಟ ಬಾಂಜರಮೂಲೆ ಯಲ್ಲಿ ಅಕ್ರಮ ತಂಬಾಕು ಉತ್ಪನ್ನ ದಾಸ್ತಾನಿನ ಬಗ್ಗೆ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿ ಬದ್ರುದ್ದೀನ್ ಪರಾರಿಯಾಗಿದ್ದಾನೆ.
ಬಾಡಿಗೆಗೆ ಮನೆ ಪಡೆದು ಪಾನ್ ಮಸಾಲ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಈತ ದಾಸ್ತಾನಿರಿಸಿ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪರಿಸರ ವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಇದರಂತೆ ಮಂಗಳವಾರ ಮಧ್ಯಾಹ್ನ ದಾಳಿ ನಡೆಸಿದ ಪೊಲೀಸರು ಮನೆಯಲ್ಲಿ ತಪಾಸಣೆ ನಡೆಸಿದಾಗ ಭಾರೀ ಪ್ರಮಾಣ ದ ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡಿರುವ ಪೊಲೀಸರು ಆರೋಪಿಗಾಗಿ ತನಿಖೆ ಆರಂಭಿಸಿದ್ದಾರೆ