ಮಂಗಳೂರು, ಮೇ 25 (DaijiworldNews/SM): ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಅನಾಹುತವೊಂದು ತಪ್ಪಿದಂತಾಗಿದೆ.
ಮಂಗಳೂರಿನ ಪಿವಿಎಸ್ ಬಳಿ ಮೇ 25ರ ಬುಧವಾರದಂದು ಘಟನೆ ನಡೆದಿದೆ. ಕಾರು ಚಲಿಸುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಕಾರನ್ನು ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದಾರೆ. ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.