ಮಂಗಳೂರು, ಮೇ 25 (DaijiworldNews/HR): ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿರವುದನ್ನು ವಿರೋಧಿಸಿ ಮಂಗಳೂರಿನ ಹಂಪನ ಕಟ್ಟೆ ಯುನಿವರ್ಸಿಟಿ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಕೆಲವು ದಿನಗಳ ಹಿಂದೆ ಕಾಲೇಜು ಆಡಳಿತ ಮಂಡಳಿ ಸಭೆ ನಡೆಸಿದ್ದು, ಸಭೆಯಲ್ಲಿ ಹಿಜಾಬ್ ಧರಿಸದಂತೆ ತೀರ್ಮಾನಿಸಲಾಗಿತ್ತು. ಆದರೆ ಕೆಲ ವಿದ್ಯಾರ್ಥಿನಿಯರು ಕಾಲೇಜಿಗೆ ಇಂದು ಹಿಜಾಬ್ ಧರಿಸಿ ಬಂದಿದ್ದು, ಉಳಿದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಇನ್ನು ಕಾಲೇಜಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದ ಹಿನ್ನೆಲೆಯಲ್ಲಿ ಎಬಿವಿಪಿ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.