ಕಾಸರಗೋಡು, ಮೇ 27 (DaijiworldNews/SM): ಕಣ್ಣೂರು ವಿಮಾನ ನಿಲ್ದಾಣದಿಂದ ಸುಮಾರು 80 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಕಾಸರಗೋಡು ನಿವಾಸಿಯೋರ್ವನನ್ನು ಬಂಧಿಸಿದ್ದಾರೆ. ಕಾಸರಗೋಡು ಹಿದಾಯತ್ ನಗರದ ಅಬ್ದುಲ್ ತೌಫಿಕ್ ಬಂಧಿತ ಆರೋಪಿಯಾಗಿದ್ದಾನೆ.
ಅಬುದಾಬಿಯಿಂದ ಬಂದಿಳಿದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಈತ ಕಣ್ಣೂರಿಗೆ ಆಗಮಿಸಿದ್ದ. ಈತ ತಂದಿದ್ದ ಮಿನಿ ಕೂಲರ್ ನಲ್ಲಿ ಚಿನ್ನವನ್ನು ಬಚ್ಚಿಟ್ಟು ತಂದಿದ್ದು, ಅಧಿಕಾರಿಗಳು ತಪಾಸಣೆ ನಡೆಸಿದಾಗ ಚಿನ್ನ ಪತ್ತೆಯಾಗಿದೆ. ಸಂಶಯಗೊಂಡು ತಪಾಸಣೆ ನಡೆಸಿದಾಗ ಅಕ್ರಮ ಸಾಗಾಟ ಪತ್ತೆಯಾಗಿದೆ.
ಕಣ್ಣೂರಿನಲ್ಲಿ ಒಂದೇ ದಿನ 1.10 ಕೋಟಿ ರೂಪಾಯಿ ಮೌಲ್ಯದ ಚಿನ್ನ ಪತ್ತೆಯಾಗಿದೆ. ಇತರ ಎರಡು ಪ್ರಕಾರಗಳಲ್ಲಿ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದ್ದು, ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಎಸೆದು ಹೋಗಿದ್ದ 268 ಗ್ರಾಂ ಹಾಗೂ ಕರ್ನಾಟಕ ನಿವಾಸಿಯೋರ್ವನಿಂದ 360 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.