ಮಂಗಳೂರು, ಮೇ 27 (DaijiworldNews/SM): ವಿವಿ ಘಟಕ ಕಾಲೇಜಿನಲ್ಲಿ ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಕಾಲೇಜಿನಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ನಡೆಸಿದ್ದು, ಬಳಿಕ ಶಾಸಕ ವೇದವ್ಯಾಸ ಕಾಮತ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಸೋಮವಾರದಿಂದ ನೂರಕ್ಕೆ ನೂರು ಕೋರ್ಟ್ ಆದೇಶ ಪಾಲಿಸಬೇಕು. ಅವರಿಗೆ ವಿಶ್ರಾಂತಿ ಕೊಠಡಿಯಲ್ಲಿ ಅವಕಾಶ ಕೊಟ್ಟು ತರಗತಿಗೆ ತೆಗೆದಿಟ್ಟು ಹೋಗಲಿ. ಜೊತೆಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕೌನ್ಸೆಲಿಂಗ್ ಮಾಡುವ ಕೆಲಸ ವಿಸಿಯವರು ಮಾಡ್ತಾರೆ. ಇಲ್ಲಿನ ವಿದ್ಯಾರ್ಥಿಗಳ ಪ್ರತಿಭಟನೆ ತಪ್ಪಲ್ಲ, ಅದು ಪ್ರಜಾಪ್ರಭುತ್ವದ ಹಕ್ಕು. ಕೋರ್ಟ್ ಆದೇಶ ಪಾಲಿಸದ ಕಾರಣಕ್ಕೆ ಅವರು ಇಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪದವಿ ಕಾಲೇಜುಗಳಿಗೆ ಕೋರ್ಟ್ ಆದೇಶ ಅನ್ವಯ ಆಗುತ್ತಾ ಅನ್ನೋ ಪ್ರಶ್ನೆ ಇದೆ. ಆದರೆ ಕೋರ್ಟ್ ಆದೇಶದಲ್ಲಿ ಸರ್ಕಾರ, ಉನ್ನತ ಶಿಕ್ಷಣ ಇಲಾಖೆ ಮತ್ತು ಯುನಿವರ್ಸಿಟಿ ಪಾರ್ಟಿ ಮಾಡಲಾಗಿದೆ. ಹೀಗಿರುವಾಗ ಈ ಆದೇಶ ಸಹಜವಾಗಿ ಎಲ್ಲ ಕಾಲೇಜುಗಳಿಗೆ ಅನ್ವಯ ಆಗುತ್ತೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.