ಮಂಗಳೂರು, ಜ 10 (MSP): ಮಹಾನಗರ ಪಾಲಿಕೆಯಲ್ಲಿ ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ, ತಕ್ಷಣ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿಯವರ ಹೆಸರನ್ನು ಯಾವುದಾದರೂ ಪ್ರಮುಖ ರಸ್ತೆಗೆ ಇಡಲಾಗುವುದು ಎಂದು ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದ್ದಾರೆ.
ಮಧುಕರ್ ಶೆಟ್ಟಿಯವರು ತಮ್ಮ ಸೇವಾವಧಿಯಲ್ಲಿ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ, ಅನೇಕ ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆ ತಂದಿದ್ದರು. ಅವರು ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು ನಮ್ಮ ಭಾಗ್ಯ. ಅವರದ್ದು ಸಾಯುವ ವಯಸ್ಸಲ್ಲ. ಅವರ ಸೇವೆ ನಮ್ಮ ರಾಜ್ಯಕ್ಕೆ ಇನ್ನೂ ಅನೇಕ ವರ್ಷಗಳ ತನಕ ಬೇಕಿತ್ತು ಎಂದು ತಿಳಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯರಾದ ಮಧುಕರ್ ಶೆಟ್ಟಿ ಅವರ ಹೆಸರನ್ನು ಯಾವತ್ತೂ ಜ್ಞಾಪಕದಲ್ಲಿ ಇಡಬೇಕು. ಆ ನಿಟ್ಟಿನಲ್ಲಿ ಕೆಲವೇ ದಿನಗಳಲ್ಲಿ ಬರುವ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ತಕ್ಷಣ ಮಂಗಳೂರಿನ ರಸ್ತೆಗೆ ಮಧುಕರ ಶೆಟ್ಟಿಯವರ ಹೆಸರನ್ನು ಇಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.