ಮಂಗಳೂರು, ಮೇ 31 (DaijiworldNews/SM): ಮಳಲಿ ಮಸೀದಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ನ್ಯಾಯಾಲಯ ಯಾವ ತೀರ್ಪು ನೀಡುತ್ತದೆ ಅದರ ಆಧಾರದಲ್ಲಿ ಮುಂದಿನ ನಿರ್ಧಾರವನ್ನು ಕೈಗೊಳ್ಳಲಾಗುವುದೆಂದು ಸಿಎಂ ಬಸರಾಜ್ ಬೊಮ್ಮಾಯಿಯವರು ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ಅವರು ಮಾಧ್ಯದ ಪ್ರಶ್ನೆಗೆ ಉತ್ತರಿಸಿದರು. ಇನ್ನು ಪಠ್ಯ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ರೋಹಿತ್ ಚರ್ಕತೀರ್ಥ ಅವರನ್ನು ಪಠ್ಯ ಪರಿಷ್ಕರಣೆ ಸದಸ್ಯತ್ವ ವಜಾಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ಈಗಾಗಲೇ ಇದರ ಬಗ್ಗೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ನಾಳೆ ಶಿಕ್ಷಣ ಸಚಿವರು ವರದಿ ಕೊಡುತ್ತೇನೆ ಎಂದು ಹೇಳಿದ್ದಾರೆ. ವರದಿಯ ಬಳಿಕ ಏನು ಕ್ರಮ ಕೈಗೊಳ್ಳಬೇಕು ಎಂಬುವುದರ ಬಗ್ಗೆ ನಿರ್ಧಾರ ಮಾಡುತ್ತೇನೆ. ಕೆಲವು ಸತ್ಯಾಂಶಗಳನ್ನು ಸಂಪೂರ್ಣವಾಗಿ ವಿವರಿಸುತ್ತೇನೆ ಎಂದು ಹೇಳಿದ್ದಾರೆ.