ಬಂಟ್ವಾಳ, ಜೂ 01 (DaijiworldNews/MS): ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು- ಪುಂಜಾಲಕಟ್ಟೆ ಹೆದ್ದಾರಿಯ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಬುಧವಾರ ಮಧ್ಯಾಹ್ನ ನಡೆದಿದೆ.
ಘಟನೆಯಲ್ಲಿ ಮಡಂತ್ಯಾರಿನ ಕಾಟರಿಂಗ್ ಉದ್ಯಮಿ ರೋಶನ್ ಸೆರಾವೊ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಎರಡೂ ವಾಹನಗಳು ನಜ್ಜುಗುಜ್ಜಾಗಿದ್ದು, ಕಾರು ಅಪಘಾತದ ರಭಸಕ್ಕೆ ರಸ್ತೆಯ ಪಕ್ಕಕ್ಕೆ ಇಳಿದಿದೆ.
ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.