ಉಪ್ಪಿನಂಗಡಿ,ಜೂ 02 (DaijiworldNews/HR): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಾಲೇಜು ಉಪನ್ಯಾಸಕರ ಸಭೆಯ ಒಮ್ಮತದ ತೀರ್ಮಾನದಂತೆ ಹಿಜಾಬ್ ತೆಗೆಯಲು ನಿರಾಕರಿಸಿದ 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿ ಪ್ರಾಂಶುಪಾಲರು ಆದೇಶ ಹೊರಡಿಸಿದ್ದಾರೆ.
ಇನ್ನು ಕಾಲೇಜಿನಲ್ಲಿ ಒಂದು ಕೋಮಿನ ವಿದ್ಯಾರ್ಥಿನಿಯರನ್ನು ಇನ್ನೊಂದು ಕೋಮಿನ ವಿದ್ಯಾರ್ಥಿಗಳು ಚುಡಾಯಿಸಿದಾಗ ಆಕ್ಷೇಪಿಸಿದ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ತಕ್ಷಣವೇ ಕಾಲೇಜಿಗೆ ಪೊಲೀಸರು ದೌಡಾಯಿಸಿ ಘರ್ಷಣೆ ನಿರತ ವಿದ್ಯಾರ್ಥಿಗಳನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.