ಕಾಸರಗೋಡು, ಜೂ 02 (DaijiworldNews/HR): ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಟಿಪ್ಪರ್ ಲಾರಿ ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬಳೆ ಠಾಣಾ ವ್ಯಾಪ್ತಿಯ ಸಬ್ಬಯ್ಯಕಟ್ಟೆಯಲ್ಲಿ ನಡೆದಿದೆ.
ಸುಬ್ಬಯ್ಯ ಕಟ್ಟೆ ನೀರ್ಪಾಂತಿಯ ರಾಜ್ ಕುಮಾರ್ (50) ಮೃತಪಟ್ಟವರು.
ಭಾನುವಾರ ಮನೆಯಿಂದ ತೆರಳಿದ್ದ ರಾಜ್ ಕುಮಾರ್ ನಾಪತ್ತೆಯಾಗಿದ್ದು, ಈ ಬಗ್ಗೆ ಕುಂಬಳೆ ಪೊಲೀಸರಿಗೂ ದೂರು ನೀಡಲಾಗಿತ್ತು. ಮೊಬೈಲ್ ಸ್ವಿಚ್ಡ್ ಆಫ್ ಆಗಿತ್ತು. ಈ ನಡುವೆ ಶೋಧ ನಡೆಸಿದಾಗ ಮನೆಯ ಅಲ್ಪ ದೂರದ ಮರ ವೊಂದರಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಇನ್ನು ಮೃತ ದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಬಿಟ್ಟು ಕೊಡಲಾಯಿತು.