ಕಾಸರಗೋಡು, ಜೂ 04 (DaijiworldNews/MS): ಯುವ ದಂಪತಿಯ ಮನೆಯೊಳಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರ್ಲದಲ್ಲಿ ನಡೆದಿದೆ.
ಸರ್ಪಮಲೆ ಶೇತ್ತಿಬೈಲ್ ನ ವಸಂತ (26) ಮತ್ತು ಪತ್ನಿ ಶರಣ್ಯ (22) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿ ಇಬ್ಬರು ಮಾತ್ರ ವಾಸವಾಗಿದ್ದು, ಎರಡು ವರ್ಷಗಳ ಹಿಂದೆ ಇವರ ವಿವಾಹವಾಗಿತ್ತು.
ಶುಕ್ರವಾರ ಇವರ ಮನೆಯ ಬಾಗಿಲು ತೆರೆದಿರಲಿಲ್ಲ. ಸಂಜೆ ತನಕ ಇಬ್ಬರೂ ಕಾಣದಿರುವುದರಿಂದ ಸಂಶಯಗೊಂಡು ಪರಿಸರವಾಸಿಗಳು ಗಮನಿಸಿದಾಗ ಇಬ್ಬರು ನೇಣು ಬಿಗಿದಿರುವು ದು ಕಂಡು ಬಂದಿದೆ. ಶರಣ್ಯ ಮೂಲತಃ ಕಜಂಪಾಡಿ ನಿವಾಸಿ ಎಂದು ತಿಳಿದುಬಂದಿದೆ.
ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ . ಪೊಲೀಸರು ಈ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.ಬದಿಯಡ್ಕ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳ ಮಹಜರು ನಡೆಸಿದ್ದು , ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821