ಮಂಗಳೂರು, ಜೂ. 05 (DaijiworldNews/DB): ದುಬೈಯಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 32.73 ಲಕ್ಷ ರೂ. ಮೌಲ್ಯದ 24 ಕ್ಯಾರೆಟ್ 624 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜೂ. 4ರ ಶನಿವಾರದಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಚಿನ್ನವನ್ನು ಕಾಸರಗೋಡಿನ ಪ್ರಯಾಣಿಕ ಪೌಡರ್ ರೂಪದಲ್ಲಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.