ಮಂಗಳೂರು, ಜೂ. 05 (DaijiworldNews/DB): ಕರಾವಳಿಯಲ್ಲಿ ಮಳೆ ಬಿರುಸು ಪಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 5ರಿಂದ 8ರವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರವಿವಾರ ಬೆಳಗ್ಗೆ ಮಂಗಳೂರಿನಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು.
ಶನಿವಾರ ಬೆಳಗ್ಗೆ ಕರಾವಳಿಯ ವಿವಿಧೆಡೆ ಗುಡುಗು ಸಹಿತ ಮಳೆ ಬಂದಿದೆ. ಹಗಲಿನ ವೇಳೆಯಲ್ಲಿ ಮೋಡ, ಬಿಸಿಲಿನ ವಾತಾವರಣ ಈ ಜಿಲ್ಲೆಗಳಲ್ಲಿತ್ತು. ರವಿವಾರ ಮತ್ತು ಸೋಮವಾರ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಂಭವವಿರುವುದರಿಂದ ಇಲ್ಲಿಯೂ ಇಲಾಖೆ ಎಲ್ಲೋ ಎಲರ್ಟ್ ಘೋಷಿಸಿದೆ.