ಪುತ್ತೂರು, ಜೂ 05 (DaijiworldNews/SM): ಇಲ್ಲಿನ ಪೆರ್ಲಂಪಾಡಿಯಲ್ಲಿ ನಡೆದ ಚರಣ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನರ್ಮೇಶ್ ರೈ(29), ನಿತಿಲ್ ಶೆಟ್ಟಿ(23), ವಿಜೇಶ್(22) ಎಂಬವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪುತ್ತೂರಿನ ಕೆಯ್ಯೂರು ಪಲ್ಲತ್ತಡ್ಕದಿಂದ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಆರೋಪಿಗಳ ಪತ್ತೆಗೆ ಪೊಲೀಸರ ಶೋಧ ಕಾರ್ಯ ಮುಂದುವರೆಸಿದ್ದಾರೆ. ಇನ್ನು ಇದೊಂದು ಪೂರ್ವ ದ್ವೇಷದ ಕಾರಣದಿಂದ ಹತ್ಯೆ ಎಂಬ ಬಗ್ಗೆ ಮಾಹಿತಿ ಲಭಿಸಿದೆ. ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್ಐ ಉದಯ ರವಿ, ಬೆಳ್ಳಾರೆ ಠಾಣಾ ಪಿಎಸ್ಐ ರುಕ್ಮ ನಾಯ್ಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಕಿಶೋರ್ ಪೂಜಾರಿ ತಂಡ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಬಗ್ಗೆ ದೂರು ನೀಡಲಾಗಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಸಂಪ್ಯದಲ್ಲಿ ಕಾರ್ತಿಕ್ ಮಾರ್ಲರನ್ನು ಚರಣ್ ಹತ್ಯೆ ಮಾಡಿದ್ದ. ಇದೀಗ ಜಾಮೀನಿನ ಮೇಲೆ ಚರಣ್ ಬಿಡುಗಡೆಗೊಂಡಿದ್ದ. ಇದರ ಬೆನ್ನಲ್ಲೇ ಆತನನ್ನು ಹತ್ಯೆ ಮಾಡಲಾಗಿದೆ.