ಮಂಗಳೂರು, ಜೂ 07(DaijiworldNews/MS): ಮಂಗಳೂರಿನ ಹೊರವಲಯದ ಗಂಜಿಮಠ ಬಳಿಯ ಮಳಲಿಯಲ್ಲಿ ಮಸೀದಿ ನವೀಕರಣ ಮಾಡುವ ಸಂದರ್ಭದಲ್ಲಿ ದೇಗುಲ ಶೈಲಿ ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಲಾಗಿದೆ.
ಏಪ್ರಿಲ್ 21ರಂದು ಮಳಲಿ ಮಸೀದಿ ಕಾಮಗಾರಿ ಸಂದರ್ಭದಲ್ಲಿ ದೇಗುಲ ಶೈಲಿ ಪತ್ತೆಯಾದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಜೂ.6 ನಡೆದ ವಿಚಾರಣೆ ವೇಳೆ ಈ ವಿಚಾರದಲ್ಲಿ ನ್ಯಾಯಾಲಯದ ವ್ಯಾಪ್ತಿ ಬಗ್ಗೆ ವಾದ - ಪ್ರತಿವಾದ ನಡೆಯಿತು.
ಜ್ಞಾನವಾಪಿ ಮಾಅರಿಯಲ್ಲಿ ಕೋರ್ಟ್ ಕಮಿಷನರ್ ಮೂಲಕ ಪುರಾತತ್ವ ಇಲಾಖೆಯ ನೆರೆವಿನಲ್ಲಿ ಸರ್ವೆ ನಡೆಸಬೇಕು ಎಂದು ವಿಎಚ್ ಪಿ ಪರ ವಕೀಲರು ಮನವಿ ಮಾಡಿದ್ದಾರೆ. ಇದಕ್ಕೆ ಮಸೀದಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಳಲಿ ಮಸೀದಿ ವಕ್ಫ್ ಆಸ್ತಿ ಯಾಗಿ ನಮೂದಾಗಿರುವುದರಿಂದ ವಕ್ಪ್ ಟ್ರಿಬ್ಯೂನಲ್ ಗೆ ಮಾತ್ರ ಅಧಿಕಾರವಿದೆ ಎಂದು ವಾದಿಸಿದರು.
ವಿಹಿಂಪ ಪರ ವಕೀಲ ಚಿದಾನಂದ ಕೆದಿಲಾಯ ಅವರು ವಾದ ಮಂಡನೆಗೆ ಕಾಲಾವಕಾಶ ಕೇಳಿದ್ದು ನ್ಯಾಯಾಲಯವ್ಯ್ ಜೂ.9 ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದೆ