ಬಂಟ್ವಾಳ, ಜ 12(SM): ಆಕಸ್ಮಿಕವಾಗಿ ಉದ್ಯಮಿಯೊಬ್ಬರು ನದಿಗೆ ಬಿದ್ದು ಮೃತಪಟ್ಟಿರುವ ಘಟನೆ ತಾಲೂಕಿನ ಕಸ್ಬ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಸುಂದರ ಮೂಲ್ಯ(65) ಮೃತ ವ್ಯಕ್ತಿ.
ಸುಂದರ ಮೂಲ್ಯ ಇಂದು ಬೆಳಗ್ಗೆ ಜಕ್ರಿಬೆಟ್ಟು ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಆಕಸ್ಮಿಕವಾಗಿ ನದಿಗೆ ಬಿದ್ದು ಅವರು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿಗಳು ಹಾಗೂ ಸ್ಥಳೀಯರು ಸೇರಿಕೊಂಡು ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.