ವಿಟ್ಲ, ಜೂ 10 (DaijiworldNews/MS): ಲಾರಿ ಹರಿದು ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಟ್ಲ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪ ಜೂ.10 ರ ಶುಕ್ರವಾರ ನಡೆದಿದೆ.
ಮೃತರನ್ನು ಪೆರುವಾಯಿ ಗ್ರಾಮದ ಕಡಂಬು ನಿವಾಸಿ ನಾರಾಯಣ ಕೊಡಂಗೆ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.
ಲಾರಿ ಕಲ್ಲಡ್ಕ – ಕಾಂಞಂಗಾಡ್ ರಸ್ತೆಯಲ್ಲಿ ಉಕ್ಕುಡ ಕಡೆಯಿಂದ ವಿಟ್ಲ ಕಡೆ ತೆರಳುತ್ತಿರುವ ವೇಳೆ ಅವಘಡ ಸಂಭವಿಸಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.