ಮಂಗಳೂರು, ಜೂ 10 (DaijiworldNews/SM): ಹಂಪನಕಟ್ಟೆ ಕಾಲೇಜಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆ ನಡೆಸಿದವರನ್ನು ಸಂಬಂಧಿಸಿದಂತೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಮತ್ತು ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಹಲ್ಲೆ ನಡೆಸಿದವರನ್ನು ಬಂಧಿಸುವಂಟೆ ಆಗ್ರಹಿಸಲಾಗಿದೆ.
ಪ್ರತಿಭಟನಾಕಾರರು ಕಾಲೇಜಿಗೆ ಮುತ್ತಿಗೆ ಹಾಕಿದ ಸಿಎಫ್ಐ ಮತ್ತು ಎನ್.ಎಸ್.ಯು.ಐ ಪ್ರತಿಭಟನೆ ನಡೆಸಿತು. ಈ ವೇಳೆ ಪ್ರತಿಭಟನಾಕಾರರನ್ನು ಕಾಲೇಜಿನ ಗೇಟ್ ಬಳಿ ತಡೆಯಲಾಯಿತು. ಬಳಿಕ ಗೇಟ್ ಸಮೀಪದಿಂದಲ್ಲೇ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಅಲ್ಲದೆ, ಹಲ್ಲೆ ನಡೆಸಿದವರನ್ನು ಬಂಧಿಸುವಂತೆ ಒತ್ತಾಯಿಸಿದರು.
ಇನ್ನು ಸ್ಥಳದಲ್ಲಿ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.