ಶಬರಿಮಲೆ,ಜ14(SS): ಶಬರಿಮಲೆಯಲ್ಲಿ ಜ್ಯೋತಿಯನ್ನು ಕಣ್ತುಂಬಿಕೊಳ್ಳಲು ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಸಾವಿರಾರು ಜನರು ಬರುತ್ತಿದ್ದಾರೆ. ಆದರೆ, ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಭಕ್ತರ ಸಂಖ್ಯೆ ಕಡಿಮೆಯಾಗಿದೆ.
ಕೇರಳದ ಭಕ್ತರು ಶಬರಿಮಲೆಗೆ ಭೇಟಿ ಕೊಡುವ ಸಂಖ್ಯೆ ಈ ಬಾರಿ ಕಮ್ಮಿಯಾಗಿದೆ. ಆದರೆ, ತಮಿಳುನಾಡು, ಕರ್ನಾಟಕ ಮತ್ತು ಆಂಧ್ರ ಪ್ರದೇಶದಿಂದ ಬರುವ ಭಕ್ತರ ಸಂಖ್ಯೆ ಗಣನೀಯವಾಗಿಯೇ ಇದೆ. ಋತುಸ್ರಾವ ವಯೋಮಾನದ ಮಹಿಳೆಯರು ದೇಗುಲ ಪ್ರವೇಶಿಸುವುದಕ್ಕೆ ಸಂಬಂಧಿಸಿದ ವಿವಾದ ಭಕ್ತರ ಸಂಖ್ಯೆ ಕುಸಿಯಲು ಕಾರಣ ಎನ್ನಲಾಗಿದೆ.
ಶಬರಿಮಲೆ ದೇವಸ್ಥಾನದ ಹದಿನೆಂಟು ಮೆಟ್ಟಿಲುಗಳ ಬಳಿಯಲ್ಲಿ ಈ ಭಾರಿ ಸರತಿ ಸಾಲು ಕಂಡು ಬಂದಿಲ್ಲ. ದಟ್ಟಣೆ ಕಡಿಮೆ ಇರುವುದರಿಂದ ಭಕ್ತರಿಗೆ ದರ್ಶನ ಪಡೆಯುವುದು ಸುಲಭವಾಗಿದೆ. ಪಟ್ಟನಂತಿಟ್ಟದಿಂದ ಪಂಪಾವರೆಗೆ ಹೋಗುವ ಬಸ್ಗಳಲ್ಲಿ ಸಾಮಾನ್ಯವಾಗಿ ಭಾರಿ ದಟ್ಟಣೆ ಇರುತ್ತಿತ್ತು. ಈ ಬಾರಿ ಮಕರ ಜ್ಯೋತಿಯ ಮುನ್ನಾದಿನವೂ ಅಂತಹ ದಟ್ಟಣೆ ಇರಲಿಲ್ಲ ಎಂದು ಮೂಲಗಳು ತಿಳಿಸಿದೆ.
ಕಳೆದ ವರ್ಷದ ಮಕರ ಜ್ಯೋತಿ ಮುನ್ನಾದಿನ ಎರಡು ಲಕ್ಷಕ್ಕೂ ಹೆಚ್ಚು ಭಕ್ತರು ಭೇಟಿ ಕೊಟ್ಟಿದ್ದರು.