ಕಾಸರಗೋಡು, ಜೂ 14 (DaijiworldNews/DB): ವಿದ್ಯಾರ್ಥಿಗಳು ನಿರ್ವಾಹಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ತಲಪಾಡಿ- ಕಾಸರಗೋಡು ರಸ್ತೆಯಲ್ಲಿ ಮಂಗಳವಾರ ಖಾಸಗಿ ಬಸ್ ಕಾರ್ಮಿಕರು ಮುಷ್ಕರ ನಡೆಸಿದರು.
ಮುಷ್ಕರದಿಂದಾಗಿ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಸಮಸ್ಯೆಗೆ ಸಿಲುಕಿದರು. ಸೋಮವಾರ ಸಂಜೆ ಬಸ್ ಪಾಸ್ ಸಂಬಂಧ ವಿದ್ಯಾರ್ಥಿಗಳು ಹಾಗೂ ನಿರ್ವಾಹಕನ ನಡುವೆ ವಾಗ್ವಾದ ನಡೆದಿದ್ದು, ಹರೀಶ್ ಎಂಬ ನಿರ್ವಾಹಕನ ಮೇಲೆ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಹಲ್ಲೆ ಖಂಡಿಸಿ ಮಂಗಳವಾರ ಬಸ್ ಕಾರ್ಮಿಕರು ಮುಷ್ಕರ ನಡೆಸಿದ್ದರು.