ಸುಬ್ರಹ್ಮಣ್ಯ, ಜೂ 15 (DaijiworldNews/DB): ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಜಾನುವಾರು ಕಳವಿಗೆ ಯತ್ನಿಸಿದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಮರ್ ಫಾರೂಕ್ ಎಂದು ಗುರುತಿಸಲಾಗಿದೆ. ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪಾರ್ಕಿಂಗ್ ಸ್ಥಳದಲ್ಲಿ ಮಾರ್ಚ್ 23ರಂದು ಯಾರೋ ಅಪರಿಚಿತರು ಕಾರಿನಲ್ಲಿ ಬಂದು ಜಾನುವಾರುಗಳನ್ನು ಕಳವುಗೈಯಲು ಹೊಂಚು ಹಾಕಿದ್ದರು. ಈ ಪ್ರಕರಣ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉಮರ್ ಫಾರೂಕ್ನನ್ನು ಸುಬ್ರಹ್ಮಣ್ಯ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಉಳಿದ ಮೂವರು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.