ಮಂಗಳೂರು, ಜ 15 (MSP): ಜಿಲ್ಲೆಯ ಮೂರು ಪ್ರಮುಖ ಘಾಟಿ ರಸ್ತೆ ಮತ್ತು ಧಾರ್ಮಿಕ ಕೇಂದ್ರಗಳ ಸಂಪರ್ಕ ರಸ್ತೆ ಅಭಿವೃದ್ದಿ. ಕಿರು ಸೇತುವೆಗಳ ಅಭಿವೃದ್ದಿ , ಒಳನಾಡು ಜಲ ಸಾರಿಗೆ ಉತ್ತೇಜನ, ವಿಮಾನ ನಿಲ್ದಾಣ ಅಭಿವೃದ್ದಿ, ಕಿರು ಸೇತುವೆ ಮತ್ತು ರಸ್ತೆಗಳ ಅಭಿವೃದ್ದಿಗೆ 30 ಕೋಟಿ ರೂ.ಗಳ ಬೇಡಿಕೆ - ಇದು ರಾಜ್ಯ ಬಜೆಟ್ ಗೆ ಪೂರ್ವಭಾವಿಯಾಗಿ ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಹೈಲೈಟ್ಸ್.
ಒಟ್ಟಾರೆ ಹೇಳಬೇಕೆಂದರೆ ಜಿಲ್ಲೆಯ ಸಂಪರ್ಕ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚುವರಿ ಅನುದಾನ ನೀಡುವಂತೆ ಪ್ರಸ್ತಾಪನೆ ಮಂಡಿಸಲು ನಿರ್ಧರಿಸಲಾಯಿತು. ಈ ಬಗ್ಗೆ ಜಿಲ್ಲಾ ಮಟ್ಟ್ದ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸಮಲೋಚನೆ ನಡೆಸಿದರು. ಎಲ್ಲಾ ಅಗತ್ಯಗಳ ಬಗ್ಗೆ ಸಮಗ್ರವಾಗಿ ಮಾಹಿತಿ ಸಂಗ್ರಹಿಸಿ ಬಜೆಟ್ ನಲ್ಲಿ ಒಪ್ಪಿಗೆ ಪಡೆಯಲು ಪ್ರಸ್ತಾಪನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಹೇಳಿದರು. ಜಿಲ್ಲೆಯಲ್ಲಿ ಪ್ರಮುಖವಾಗಿ ಮೂರು ಘಾಟಿ ರಸ್ತೆ ಮತ್ತು ಧಾರ್ಮಿಕ ಕೇಂದ್ರಗಳ ಸಂಪರ್ಕ ರಸ್ತೆ ಅಭಿವೃದ್ದಿ ಮತ್ತು ಒಳನಾಡು ಜಲಸಾರಿಗೆ ಅಗತ್ಯ ಮಾಹಿತಿ ಪ್ರಸ್ತುತಪಡಿಸಲಾಯಿತು.
ಪ್ರವಾಸೋದ್ಯಮದಡಿ ಕೂಳೂರಿನಿಂದ ನೇತ್ರಾವತಿಯವರೆಗೆ 13 ಜೆಟ್ಟಿ ನಿರ್ಮಾಣಕ್ಕೆ ಪ್ರಸ್ತಾವನೆ ಸಿದ್ಧವಾಗಿದ್ದು, ಈ ಯೋಜನೆಯಿಂದ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರೋತ್ಸಾಹ ದೊರೆಯಲಿದೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು. ಇದರ ಜೊತೆಗೆ ಹರೇಕಳ ನದೀತೀರವನ್ನು ಅಭಿವೃದ್ಧಿ ಪಡಿಸಿ ಎಂದ ಸಚಿವರು, ಸಸಿಹಿತ್ಲುವಿನಲ್ಲಿ ಸರ್ಫಿಂಗ್ ಝೋನ್ ಅಭಿವೃದ್ಧಿಗೆ ಸಲ್ಲಿಸಲಾದ ಪ್ರಸ್ತಾವನೆಗೆ ಅನುಮೋದನೆ ನೀಡಲು ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.
ಈ ವೇಳೆ ಉಸ್ತುವಾರಿ ಕಾರ್ಯದರ್ಶಿ ವಿ.ಪೊನ್ನುರಾಜ್ , ಜಿ.ಪಂ ಸಿಇಒ ಡಾ.ಆರ್ ಸೆಲ್ವಮಣಿ, ಎಡಿಸಿ ಕುಮಾರ್ , ಮನಪಾ ಆಯುಕ್ತ ಮಹಮ್ಮದ್ ನಝೀರ್ ಉಪಸ್ಥಿತರಿದ್ದರು.