ಮಂಗಳೂರು, ಜೂ 17 (DaijiworldNews/MS): ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಜಾರಿ ನಿರ್ದೇಶನಾಲಯ ವಿಚಾರಣೆ ವಿರೋಧಿಸಿ ಜೂ. ೧೭ ರ ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರು ನಗರದ ಫಳ್ನೀರ್ನ ಎಸ್ಎಲ್ ಮಥಾಯಿಸ್ ಪಾರ್ಕ್ನಿಂದ ಅತ್ತಾವರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನೆಯಲ್ಲಿ ಮೆರವಣಿಗೆಯಲ್ಲಿಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕ, ಜೆ. ಆರ್ ಲೋಬೋ , ಐವಾನ್ ಡಿಸೋಜಾ, ಹರೀಶ್ ಕುಮಾರ್, ಮಾಜಿ ಮೇಯರ್ ಕವಿತಾ ಸನಿಲ್ ಮುಂತಾದ ಮುಖಂಡರುಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಪ್ರತಿಭಟನಾ ನಿರತ ಮುಖಂಡರು ಹಾಗೂ ಕಾರ್ಯಕರ್ತ ಕೇಂದ್ರ ಸರ್ಕಾರ ವಿರುದ್ಧ ಘೊಷಣೆ ಕೂಗಿ, ಇಡಿ ಕಚೇರಿಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರನ್ನು ತಡೆದು, ಕಾರ್ಯಕರ್ತರನ್ನು ವಶಕ್ಕೆ ಪಡೆದರು.