ಮಡಿಕೇರಿ,ಜ 15 (MSP): ನಾನ್ ವೆಜ್ ತಿನ್ನಬೇಡಿ ಎಂಬ ಸಲಹೆಯನ್ನು ಕೇಳಿ ಮಾನಸಿಕ ಒತ್ತಡಕ್ಕೆ ಒಳಗಾದ ನಿವೃತ್ತ ಪೊಲೀಸ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಮಡಿಕೇರಿ ತಾಲೂಕಿನ ಮೂರ್ನಾಡು ಸಮೀಪದ ಬಲಮುರಿ ನಿವಾಸಿ ಬೆಳ್ಳಿಯಪ್ಪ (64) ಎಂದು ಗುರುತಿಸಲಾಗಿದೆ. ಇವರು ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಆದರೆ ಇವರು ಕಳೆದ ಹಲವು ವರ್ಷಗಳಿಂದ ಮೆದುಳಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಇದಕ್ಕೆ ಔಷದೋಪಚಾರ ನಡೆಸಿದ್ದರು.
ಆದರೆ ಇದೇ ಖಾಯಿಲೆಗೆ ಸಂಬಂಧಿಸಿ ಮೈಸೂರಿನ ಚಿಕಿತ್ಸೆ ಪಡೆಯುತ್ತಿದ್ದಾಗ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಅವರ ಆರೋಗ್ಯದ ದೃಷ್ಟಿಯಲ್ಲಿ ಮಾಂಸಹಾರ ಸೇವನೆ ಮಾಡಬೇಡಿ ಎಂದು ಸಲಹೆ ನೀಡಿದ್ದರು. ಆದರೆ ಡಾಕ್ಟರ್ ನಾನ್ ವೆಜ್ ತಿನ್ನುವುದು ಬಿಟ್ಟು ಬಿಡಿ ಎಂಬ ಕೇಳಿದ ಬೆಳ್ಳಿಯಪ್ಪ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದೇ ಹಿನ್ನಲೆಯಲ್ಲಿ ಮನೆಯಲ್ಲಿ ಯಾರು ಇಲ್ಲದ ವೇಳೆ ಸೋಮವಾರ ರಾತ್ರಿ ಪಿಸ್ತೂಲ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಕುರಿತು ನಾಪೊಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.