ಕುಂದಾಪುರ,ಜ 16(MSP): ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಅವಾಂತರ ಮುಂದುವರೆಯುತ್ತಿದ್ದು, ಮಂಗಳವಾರ ರಾತ್ರಿ ಕಲ್ಲಿದ್ದಲು ತುಂಬಿದ ಲಾರಿಯೊಂದು ಪಲ್ಟಿ ಹೊಡೆದಿದೆ.
ಕುಂದಾಪುರ ಸಮೀಪದ ಬೊಬ್ಬರ್ಯನ ಕಟ್ಟೆ ದೇವಸ್ಥಾನದ ಮುಂಭಾಗ ಘಟನೆ ನಡೆದಿದ್ದು, ಲಾರಿ ಚಲಿಸುತ್ತಿದ್ದ ವೇಳೆ ರಸ್ತೆ ಕುಸಿದು ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಪಲ್ಟಿಯಾದ ಲಾರಿಯು ಮಂಗಳೂರಿಂದ ಭಟ್ಕಳ ಕಡೆಗೆ ಪ್ರಯಾಣಿಸುತ್ತಿತ್ತು. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಕ್ಲಿನರ್ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಲಾರಿ ಪಲ್ಟಿಯಾದ ಕಾರಣ ಸ್ವಲ್ಪ ಸಮಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. .ಕುಂದಾಪುರ ಸಂಚಾರಿ ಪೋಲಿಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು. ಘಟನೆ ನಡೆದ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ದಿನೇಶ್ ಕುಮಾರ್ ಭೇಟಿ ನೀಡಿದ್ದು, ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ