ಬಂಟ್ವಾಳ, ಜ 16(SM): ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಲ್ಲಡ್ಕ ಸಮೀಪದ ಪೂರ್ಲಿಪಾಡಿ ಎಂಬಲ್ಲಿ ನಡೆದಿದೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿಯಾಗಿದೆ. ಮಂಗಳೂರು ಕಡೆಯಿಂದ ಡೀಸೆಲ್ ಹೊತ್ತುಕೊಂಡು ಬೆಂಗಳೂರು ಕಡೆಗೆ ಸಾಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಲಾರಿ ಪಲ್ಟಿಯಾಗಿ ಚಾಲಕ ಲಾರಿಯಿಂದ ಕೆಳಗೆ ಎಸೆಯಲ್ಪಟ್ಟು ಗಂಬೀರ ಗಾಯಗೊಂಡಿದ್ದಾರೆ. ಗಾಯಗೊಂಡ ಚಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ.
ಟ್ಯಾಂಕರ್ ಪಲ್ಟಿಯಾದ ರಭಸಕ್ಕೆ ಟ್ಯಾಂಕ್ ಒಡೆದು ಡೀಸೆಲ್ ಸೋರಿಕೆಯಾಗುತ್ತಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ. ಕಾರೊಂದನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಡಿಯಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದರೂ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಬಂಟ್ವಾಳ ನಗರ ಠಾಣಾ ಎಸ್.ಐ.ಚಂದ್ರಶೇಖರ್, ಮೆಲ್ಕಾರ್ ಟ್ರಾಫಿಕ್ ಎಸ್.ಐ. ಮಂಜುಳಾ ಹಾಗೂ ಅಗ್ನಿಶಾಮಕ ದಳದವರು ಆಗಮಸಿ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ.