ಕಡಬ, ಜೂ 23 (DaijiworldNews/HR): ತಾಲೂಕಿನ ಇಚ್ಲಂಪಾಡಿ ಸಮೀಪದ ಕೊರಮೇರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ವಿದ್ಯಾರ್ಥಿಗಳ ಕೊರತೆಯಿಂದ ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಕಡಬ ಕಾರ್ಯ ನಿರ್ವಹಣಾಧಿಕಾರಿ ಲೋಕೇಶ್ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮೂರು ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಸೇರಿದ್ದರು. ಹೀಗಾಗಿ ಶಾಲೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಮೂವರು ವಿದ್ಯಾರ್ಥಿಗಳನ್ನು ಸಮೀಪದ ಶಾಲೆಗೆ ದಾಖಲಿಸಲಾಗಿದೆ. ಹೆಚ್ಚಿನ ವಿದ್ಯಾರ್ಥಿಗಳು ಶಾಲೆಗೆ ಸೇರಿದರೆ ಮತ್ತೆ ತೆರೆಯಲಾಗುತ್ತದೆ ಎಂದರು.
ಸ್ಥಳೀಯರಾದ ಕೇಶವಗೌಡ ಕೊರಮೇರು ಮಾತನಾಡಿ, ಶಾಲೆಯನ್ನು 38 ವರ್ಷಗಳ ಹಿಂದೆ ಸ್ಥಾಪಿಸಲಾಗಿದ್ದು, ಶಾಲೆಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆ ಕ್ಷೀಣಿಸಲಾರಂಭಿಸಿತು ಮತ್ತು ಈಗ ಶಾಲೆಯನ್ನು ಮುಚ್ಚಲಾಗಿದೆ ಎಂದಿದ್ದಾರೆ.
ಶಾಲೆಯು ಒಂದರಿಂದ ಐದನೇ ತರಗತಿವರೆಗೆ ತರಗತಿಗಳನ್ನು ನಡೆಸುತ್ತಿತ್ತು. ಈ ಶಾಲೆಯ ಒಬ್ಬ ಶಿಕ್ಷಕರನ್ನು ಬೇರೆಡೆಗೆ ನಿಯೋಜಿಸಲಾಗಿದೆ.
ಕಳೆದ ಶೈಕ್ಷಣಿಕ ವರ್ಷದಲ್ಲಿ ಒಂಬತ್ತು ಅನುದಾನರಹಿತ ಶಾಲೆಗಳು ಸೇರಿದಂತೆ 14 ಶಾಲೆಗಳನ್ನು ಮುಚ್ಚಲಾಗಿತ್ತು.