ಮಂಗಳೂರು,ಜ 17(MSP):ಸಮ್ಮಿಶ್ರ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಮತ್ತು ರೆಸಾರ್ಟ್ ರಾಜಕೀಯ ಮಾಡುತ್ತಿರುವ ಬಿಜೆಪಿ ಧೋರಣೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕದ್ರಿಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ನೇತೃತ್ವದಲ್ಲಿ ಜ.17 ರ ಗುರುವಾರ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಬಿ.ರಮನಾಥ ರೈ, ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಉತ್ತಮ ಕೆಲಸವನ್ನು ಮಾಡುತ್ತಿದ್ದು ಇದನ್ನು ಸಹಿಸದ ಬಿಜೆಪಿಯೂ ಸರ್ಕಾರವನ್ನು ಉರುಳಿಸುವ ವ್ಯರ್ಥ ಪ್ರಯತ್ನ ಮಾಡುತ್ತಿದೆ ಎಂದು ಕಿಡಿಕಾರಿದರು.
ಈ ವೇಳೆ ಬಿಜೆಪಿ ಪಕ್ಷದ ಶಾಸಕರು, ಸಂಸದ ನಳಿನ್ಕುಮಾರ್ ಸೇರಿದಂತೆ ಬಿಜೆಪಿ ಪಕ್ಷದ ವಿರುದ್ಧ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಕಳ್ಳಿಗೆ ತಾರನಾಥ್ ಶೆಟ್ಟಿ ಮುಂತಾದವು ಉಪಸ್ಥಿತರಿದ್ದರು.