ಮಂಗಳೂರು, ಜ 17(SM): ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 27 ಲಕ್ಷದ 56 ಸಾವಿರದ 436 ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ನಿವಾಸಿ ಅಬೂಬಕ್ಕರ್ ಮುಹಮ್ಮದ್ ಆರೋಪಿ.
ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದ ಕಾಸರಗೋಡು ನಿವಾಸಿ ಒಳ ಉಡುಪಿನಲ್ಲಿ 9.80 ಲಕ್ಷ ರೂ. ಮೌಲ್ಯದ ಚಿನ್ನ ಪತ್ತೆಯಾಗಿದೆ. ರಾಸಾಯನಿಕ ವಸ್ತು ಬಳಸಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಇಡಲಾಗಿತ್ತು.
ಇನ್ನೊಂದು ಪ್ರಕರಣದಲ್ಲಿ ದುಬೈಯಿಂದ ಆಗಮಿಸಿದ ಸ್ಪೈಸ್ ಜೆಟ್ ವಿಮಾನದಲ್ಲಿ 549.121 ಗ್ರಾಂ ಪೇಸ್ಟ್ ರೂಪದ ಚಿನ್ನ ಪತ್ತೆಯಾಗಿದೆ. ಪ್ರಯಾಣಿಕರೆಲ್ಲರೂ ಇಳಿದ ಮೇಲೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸುವಾಗ ಈ ಚಿನ್ನ ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.