ಕಾಸರಗೋಡು, ಜೂ 27 (DaijiworldNews/DB): ವರ್ಷಗಳ ಹಿಂದೆ ತಾಯಿಯನ್ನು ಕೊಲೆಗೈದಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬದಿಯಡ್ಕದಲ್ಲಿ ನಡೆದಿದೆ.
ಬದಿಯಡ್ಕ ಪೆರಡಾಲ ಶಾಂತಿಪಳ್ಳದ ವೆಂಕಪ್ಪ ನಾಯ್ಕ್ ( 42) ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಎರಡು ದಿನಗಳ ಹಿಂದೆ ಆತ್ಮಹತ್ಮೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಈತ ವರ್ಷಗಳ ಹಿಂದೆ ತಾಯಿ ಕಮಲಾ ಅವರನ್ನು ಸೀಮೆ ಎಣ್ಣೆ ಸುರಿದು ಕೊಲೆ ಮಾಡಿದ್ದನು. ಜೈಲಿನಿಂದ ಬಿಡುಗಡೆಗೊಂಡಿದ್ದ ಈತ ಇನ್ನಿತರ ಕಳವು ಪ್ರಕರಣಗಳ ಲ್ಲಿ ಶಾಮೀಲಾಗಿದ್ದನು. ಬೀಜಂತಡ್ಕದಲ್ಲಿ ಪೆಟ್ರೋಲ್ ಪಂಪ್ನಲ್ಲಿ ನಡೆದ ಕಳವು ಪ್ರಕರಣಗಳಲ್ಲಿ ಶಾಮೀಲಾಗಿ ನ್ಯಾಯಾಂಗ ಬಂಧನದಲ್ಲಿದ್ದ ಈತ ತಿಂಗಳ ಹಿಂದೆ ಬಿಡುಗಡೆಗೊಂಡಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
ವೆಂಕಪ್ಪ ನಾಯ್ಕ್ ಏಕಾಂಗಿಯಾಗಿ ಮನೆಯಲ್ಲಿ ವಾಸವಾಗಿದ್ದನು. ಬದಿಯಡ್ಕ ಠಾಣಾ ಪೊಲೀಸರು ಮಹಜರು ನಡೆಸಿ ಬಳಿಕ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿರಿಸಲಾಗಿದೆ.