ಕಾಸರಗೋಡು, ಜೂ 30 (DaijiworldNews/SM): ಭಾರೀ ಮಳೆ ಹಿನ್ನಲೆಯಲ್ಲಿ ಕಾಸರಗೋಡು ಹಾಗೂ ಮಂಜೇಶ್ವರ ತಾಲೂಕಿನ ಶಾಲೆಗಳಿಗೆ ನಾಳೆ (ಜುಲೈ 1) ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಆದೇಶ ನೀಡಿದ್ದಾರೆ. ಅಂಗನವಾಡಿಗಳಿಗೂ ರಜೆ ಅನ್ವಯವಾಗಲಿದೆ. ಕಾಲೇಜುಗಳು ಎಂದಿನಂತೆ ಕಾರ್ಯಾಚರಿ ಸಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.